ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತು ರಾಜಕೀಯ ನಾಯಕರು ನಾನಾ ಹೇಳಿಕೆ ನೀಡ್ತಿದ್ದಾರೆ. ಈ ಮಧ್ಯೆ ಶಾಸಕ ಜನಾರ್ದನ ರೆಡ್ಡಿ ಈ ಕುರಿತು ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗೆ ಜನಾರ್ದನ ರೆಡ್ಡಿ ಹನಿಟ್ರ್ಯಾಪ್ ವಿಚಾರದಲ್ಲಿ ಒಬ್ಬ ಮಹಾನ್ ನಾಯಕ ಇದ್ದಾನೆ ಎಂದು ಕಾಂಗ್ರೆಸ್‌ನವರಿಗೂ ಗೊತ್ತಿದೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಶಯದ ವಾತಾವರಣವನ್ನು ಸೃಷ್ಟಿಸಿದ್ದಾರೆ.
ಇದರ ಜೊತೆಗೆ, ಕಾಂಗ್ರೆಸ್ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನು ಉಲ್ಲೇಖಿಸಿ, “ಇದನ್ನು ನೋಡಿದ ಮೇಲೆ ರಾಜಕೀಯ ಎಷ್ಟು ಹೀನಾಯ ಸ್ಥಿತಿಗೆ ತಲುಪಿದೆ ಎಂಬುದು ಗೊತ್ತಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ. ಹಾಗೂ ಈ ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.