ಹನಿಟ್ರಾಪ್‌ ಕಾಂಟ್ರವರ್ಸಿ | ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹನಿಟ್ರ್ಯಾಪ್ ಪ್ರಕರಣ ದೇಶದಾದ್ಯಂತ ಕರ್ನಾಟಕದ ಪ್ರತಿಷ್ಠೆಗೆ ತೀವ್ರ ಧಕ್ಕೆ ತಂದಿದ್ದು, ರಾಜ್ಯದಲ್ಲಿ ಈಗ ಕ್ರಿಮಿನಲ್ ಕ್ಯಾಬಿನೆಟ್ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರ ಅಧಿಕಾರದ ದುರಾಸೆಯಿಂದ ರಾಜ್ಯವನ್ನು ನೈತಿಕ ಅವನತಿಗೆ ಕೊಂಡೊಯ್ಯುತ್ತಿದೆ. ಕೇವಲ ಎರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸುಮಾರು ಹತ್ತು ಹಗರಣಗಳು ಹೊರಬಿದ್ದಿವೆ ಎಂದು ಕಿಡಿಕಾರಿದರು.

ಎಲ್ಲಿ ನೋಡಿದರೂ ಹಗರಣಗಳ ಸರಮಾಲೆಯೇ ಕಂಡುಬರುತ್ತಿದೆ. ವಿಧಾನಸೌಧವೂ ಇದಕ್ಕೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ ರಾಜ್ಯವು ಆರ್ಥಿಕ ಬಿಕ್ಕಟ್ಟಿನಿಂದ ಹೋರಾಡುತ್ತಿತ್ತು ಮತ್ತು ಈಗ ಹನಿ ಬಿಕ್ಕಟ್ಟು ಪ್ರಾರಂಭವಾಗಿದೆ. ಈ ಸರ್ಕಾರ ಆರ್ಥಿಕವಾಗಿ ಮತ್ತು ನೈತಿಕವಾಗಿ ದಿವಾಳಿಯಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿದೆ ಎಂದು ಸ್ವತಃ ಸಂಪುಟದ ಸಚಿವರೊಬ್ಬರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಮೌನ ವಹಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!