ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿ ಟ್ರ್ಯಾ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಹನಿ ಟ್ರ್ಯಾಪ್ ಮಾಡಿದ ಘಟನೆಯ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಪ್ರಕರಣದಲ್ಲಿ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರ ಹೆಸರಿರುವುದನ್ನು ಅರ್ಜಿದಾರರು ಪತ್ತೆಹಚ್ಚಿದ್ದು, ಹೀಗಾಗಿ ಪ್ರಕರಣ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.