ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನಿಟ್ರ್ಯಾಪ್ ವಿಚಾರವಾಗಿ ಅವಶ್ಯಕತೆ ಬಿದ್ದರೆ ಭೇಟಿಯಾಗುವುದಾಗಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜೇಂದ್ರ ಮುಖ್ಯಮಂತ್ರಿಯನ್ನು ಭೇಟಿ ಮಾಡಬಹುದು. ಗೃಹ ಸಚಿವರನ್ನು ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುವುದಾಗಿ ತಿಳಿಸಿದರು. ಸದನದಲ್ಲಿ ನಾನೊಂದು ಹೇಳಿಕೆ ಮಾಡಿದ್ದೇನೆ. ಅದಕ್ಕೆ ಬದ್ಧ ಇದ್ದೇನೆ. ಏನೇನು ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ ಅದಕ್ಕೆ ಗೃಹ ಮಂತ್ರಿಗಳನ್ನ ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುವುದಾಗಿ ತಿಳಿಸಿದರು.
ಸಿಎಂ ಬಂದು 3 ಗಂಟೆಗೆ ಉತ್ತರ ಕೊಡಬೇಕಿತ್ತಲ್ಲ. ಅದಕ್ಕೂ ಮೊದಲು ಭೇಟಿ ಮಾಡಲು ಹೋಗಿದ್ದೆ. ಅವರು ಏನೋ ಓದುತ್ತಿದ್ದರು. ದೇವರು ನಿನಗೆ ಏನು ಬುದ್ದಿ ಕೊಡುತ್ತೋ ಆ ರೀತಿ ಮಾಡು ಅಂತ ಹೇಳಿದರು. ಅವರು ಮೂರು ತಿಂಗಳಿಂದ ಅಲ್ಲ, ಒಂದೂವರೆ ತಿಂಗಳಿಂದ ಪ್ರಯತ್ನ ನಡೆಯುತ್ತಿದೆ. ಏನೇನು ಕೃತ್ಯ ನಡೆದಿದೆ ಅಂತ ವಿವರವಾಗಿ ಹೇಳಿಕೆಯಲ್ಲಿ ಕೊಡುವುದಾಗಿ ತಿಳಿಸಿದರು.
ಗೃಹ ಸಚಿವರು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ತನಿಖೆ ಮಾಡಿದರೆ ಸೂಕ್ತ. ಇದರಲ್ಲಿ ಇವರು, ಅವರು ಸೇರಿದ್ದಾರೆ ಅಂತ ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಯಾರಿದ್ದಾರೆ ಅಂತ ಸತ್ಯ ಹೊರಗೆ ಬರಬೇಕು ಹೈಕಮಾಂಡ್ ಗೆ ಯಾಕೆ ದೂರು ಕೊಡಬೇಕು ಅಂದರೆ ಯಾರಾದರೂ ಹೈಕಮಾಂಡ್ ಗೆ ಸಿಡಿ ತೆಗೆದುಕೊಂಡು ಹೋಗಿ ಕೊಟ್ಟರೆ, ರಾಜಣ್ಣ ಮೊದಲೇ ಹೇಳಿದ್ದರು ಅಂತ ಗೊತ್ತಿರಬೇಕಲ್ಲ. ನಾನು ಯಾವ ರೀತಿ ಲೋಪ ಎಸಗಿಲ್ಲ. ನನ್ನ ಮೇಲೆ ಯಾವುದಾದರೂ ಲೋಪ ಇದೆ ಅಂದರೆ ನಂಬಬಾರದು ಎಂದರು.