ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ ಸದ್ದು: ಅತ್ತ ದೆಹಲಿಯಲ್ಲಿ ದೇವೇಗೌಡ, HDK ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ ವಿಚಾರ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನಿವಾಸದಲ್ಲಿ ಡಿನ್ನರ್ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೆಚ್‌ಡಿಕೆ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದ ಹೆಚ್​ಡಿಕೆ ಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ರಹಸ್ಯ ಸಭೆ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಸಚಿವ ಸತೀಶ್ ಜಾರಕಿಹೊಳಿ ಅವರಿಗಾಗಿಯೇ ಈ ಡಿನ್ನರ್ ಆಯೋಜನೆ ಮಾಡಿದ್ದರು. ಈ ವೇಳೆ ದೇವೇಗೌಡರನ್ನೂ ಭೇಟಿಯಾಗಿ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಹಲವು ವಿಚಾರಗಳಲ್ಲಿ ಹೋರಾಡುತ್ತಿರುವಾಗ ಸಚಿವ ಸತೀಶ್ ಜಾರಕಿಹೊಳಿ ಅವರು ಹೆಚ್​ಡಿಕೆ, ದೇವೇಗೌಡರನ್ನು ಭೇಟಿಯಾಗಿರೋದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಇಲಾಖೆ ಸಂಬಂಧಿಸಿದ ವಿಚಾರದ ಬಗ್ಗೆ ಚರ್ಚೆ ಮಾತ್ರ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!