ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಯತ್ನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ.
ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ರಾಜಣ್ಣ ಇಂದು ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಇಂದು ಸಂಜೆ ಪರಮೇಶ್ವರ್ ನಿವಾಸಕ್ಕೆ ತೆರಳಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದು ದೂರು ನೀಡದೇ ಮನವಿ ಮಾತ್ರ ನೀಡಿದ್ದಾರೆ. ಮನವಿ ಸ್ವೀಕರಿಸಿದ ಬಳಿಕ ಪರಮೇಶ್ವರ್ ಮಾತನಾಡಿ, ರಾಜಣ್ಣ ಇಂದು ಮನವಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.