Friday, November 28, 2025

ಹಾಂಗ್ ಕಾಂಗ್ ಬೆಂಕಿ: ಸಾವಿನ ಸಂಖ್ಯೆ 55ಕ್ಕೆ ಏರಿಕೆ, 279 ಜನ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಂಗ್ ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 55 ಕ್ಕೆ ಏರಿದ್ದು, 279 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಚೀನಾದ ಅಧಿಕೃತ ಮಾಧ್ಯಮ ವರದಿಗಳು ಗುರುವಾರ ತಿಳಿಸಿವೆ.

ಬುಧವಾರ ವಾಂಗ್ ಫುಕ್ ನಲ್ಲಿ ಸಂಭವಿಸಿದ ಬೆಂಕಿ ಅಪಘಾತ ಇವರಿಂದಲೇ ನಡೆದಿದೆ ಎಂದು ಶಂಕಿಸಲಾಗಿರುವ ಮೂವರನ್ನು ಬಂಧಿಸಲಾಗಿದೆ ಎಂದು ಹಾಂಗ್ ಕಾಂಗ್ ಪೊಲೀಸ್ ಪಡೆ ಉಲ್ಲೇಖಿಸಿ ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಹಾಂಗ್ ಕಾಂಗ್ ವಿಶೇಷ ಆಡಳಿತ ಪ್ರದೇಶದ (HKSAR) ಮುಖ್ಯ ಕಾರ್ಯನಿರ್ವಾಹಕ ಜಾನ್ ಲೀ ಮಾತನಾಡಿ, ಹಾಂಗ್ ಕಾಂಗ್ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಬೆಂಕಿ ಅವಘಡದಲ್ಲಿ 279 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ.

error: Content is protected !!