ಕನ್ನಡ ಹಿರಿಯ ನಟ ದ್ವಾರಕೀಶ್ ಗೆ ಗೌರವ ಡಾಕ್ಟರೇಟ್ ಪ್ರದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕನ್ನಡ ಹಿರಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇಂದು ನಡೆದ 57ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭಾಗವಹಿಸಿದರು.

ಈ ಕ್ಷಣ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!