ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಪುರ್ ಜಿಲ್ಲೆಯ ಗಢ್-ಕೋಟ್ವಾಲಿ ಪ್ರದೇಶದಲ್ಲಿ ದೆಹಲಿ-ಲಖನೌ ಹೆದ್ದಾರಿಯಲ್ಲಿ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
“ಹಾಪುರ್‌ನ ಗಡ್ ಕೊಟ್ವಾಲಿ ಪ್ರದೇಶದಲ್ಲಿ ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ” ಎಂದು ಹಾಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಾಜ್‌ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.
ಘಟನೆಯ ಸುದ್ದಿ ಪೊಲೀಸರಿಗೆ ತಲುಪಿದ ಕೆಲವೇ ನಿಮಿಷಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು.
ಆರು ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅಪಘಾತದ ನಂತರ ಕಾರು ರಿಪೇರಿ ಮಾಡಲಾಗದಷ್ಟು ಹಾನಿಗೊಳಗಾಗಿರುವುದನ್ನು ದೃಶ್ಯಗಳು ತೋರಿಸಿವೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.