ಭೀಕರ ಅಪಘಾತ: ರಸ್ತೆ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ(Accident) ಸಂಭವಿಸಿದ್ದು, ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದಿದೆ.

ಘಟನೆಯಲ್ಲಿ ಓರ್ವ ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!