ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿರಾಡಿ ಘಾಟ್ ನ ಗುಂಡ್ಯ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದ ವೇಗಕ್ಕೆ ಲಾರಿ ಚಾಲಕನ 2 ಕಾಲು ಕಟ್ ಆಗಿದ್ದು, ಬಸ್ ನಲ್ಲಿದ್ದ 8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಂಬುಲೆನ್ಸ್, ರಿಕ್ಷಾ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ರಸ್ತೆ ಬ್ಲಾಕ್ ಆಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕ್ರೇನ್ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಯಿತು.