ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಂತಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ತೇಗೂರು ಸರ್ಕಲ್ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ನಲ್ಲೂರು ಗ್ರಾಮದ ರಘು ಹಾಗೂ ಮಲೆದೇವರಹಳ್ಳಿ ಗ್ರಾಮದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಅವರನ್ನು ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಸಮೀಪದ ಹೂವಿನ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.