ಕಾರು-ಲಾರಿ ನಡುವೆ ಭೀಕರ ಅಪಘಾತ: ದೇವರ ದರ್ಶನಕ್ಕೆ ಹೊರಟಿದ್ದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುರಿಗೆ ತೆರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಒಡಿಶಾದ ಖುರ್ದಾ ರಾಷ್ಟ್ರೀಯ ಹೆದ್ದಾರಿ 16 ರಲ್ಲಿ ಅಪಘಾತ ಸಂಭವಿಸಿದೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆರಿವರೆಲ್ಲರೂ ದೇವರ ದರ್ಶನಕ್ಕೆ ಹೊರಟಿದ್ದರು ಎನ್ನಲಾಗಿದೆ.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ನಿಂತ ಲಾರಿಗೆ ಕಾರು ಬಂದು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ತಕ್ಷಣವೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!