ಲಾರಿ-ಬಸ್ ನಡುವೆ ಭೀಕರ ಅಪಘಾತ: 13 ಪ್ರಯಾಣಿಕರು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಗುನಾದಲ್ಲಿ ನಿನ್ನೆ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ೧೩ ಮಂದಿ ಜೀವಂತ ಸುಟ್ಟು ಭಸ್ಮವಾಗಿದ್ದಾರೆ.

ಗುನಾ-ಅರೋನಾ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಬಸ್‌ಗೆ ಬೆಂಕಿ ಹೊತ್ತಿದೆ. ಬಸ್‌ನಲ್ಲಿದ್ದ 13 ಮಂದಿ ಸಜೀವ ದಹನವಾಗಿದ್ದಾರೆ 17ಮಂದಿಗೆ ಗಂಭೀರವಾಗಿ ಗಾಯಗಳಾಗಿವೆ.

ಗುನಾ ಜಿಲ್ಲಾಸ್ಪತ್ರೆಯಲ್ಲಿ 17 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳು ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಕಾರಣ ಮೃತರ ಗುರುತು ಪತ್ತೆಯಾಗಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!