ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಟ್ನಾದ ಮಸೌರಿಯಲ್ಲಿರುವ ನೂರಾ ಸೇತುವೆಯ ಮೇಲೆ ಟ್ರಕ್ ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
“ಕಳೆದ ರಾತ್ರಿ ಪಾಟ್ನಾದ ಮಸೌರ್ಹಿಯಲ್ಲಿರುವ ನೂರಾ ಸೇತುವೆಯ ಮೇಲೆ ಟ್ರಕ್ ಮತ್ತು ಟೆಂಪೋ ಡಿಕ್ಕಿ ಹೊಡೆದು ಏಳು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಕ್ಕಿಯಿಂದಾಗಿ ಟ್ರಕ್ ಮತ್ತು ಟೆಂಪೋ ಎರಡೂ ಸೇತುವೆಯಿಂದ ಬಿದ್ದಿವೆ.” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಮೃತಪಟ್ಟವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.