ಜೈಪುರದಲ್ಲಿ ಟ್ರಕ್ ​​ಗಳ ಮಧ್ಯೆ ಭೀಕರ ಅಪಘಾತ: ನಾಲ್ವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಟ್ರಕ್ ಇತರ ಟ್ರಕ್‌ಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಕೆಲವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಘಟನೆಯಲ್ಲಿ ಇನ್ನಷ್ಟು ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೇಳಲಾಗಿದೆ.

ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್‌ಗೆ ರಾಸಾಯನಿಕ ತುಂಬಿತ್ತು ಎನ್ನಲಾಗಿದೆ.

“ಬೆಂಕಿಯು ಹಲವಾರು ಟ್ರಕ್‌ಗಳನ್ನು ಆವರಿಸಿದೆ. ಘಟನೆಯಲ್ಲಿ ಟ್ರಕ್‌ಗಳ ಸಂಖ್ಯೆ ಸ್ಪಷ್ಟವಾಗಿಲ್ಲ. ಸುಟ್ಟಗಾಯಗಳಿಂದ ಬಳಲುತ್ತಿರುವ ಕೆಲವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!