ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಯೂಟ್ಯೂಬರ್ ಗಳು ಸಾವನ್ನಪ್ಪಿದ್ದಾರೆ.
ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಮೃತಪಟ್ಟವರು. ನಾಲ್ವರು ಯುವಕರು ಯೂಟ್ಯೂಬ್‌ನಲ್ಲಿ ರೌಂಡ್ 2 ವರ್ಲ್ಡ್ ಚಾನೆಲ್ ನಲ್ಲಿ ಕಂಟೆಂಟ್ ಕ್ರಿಯೇಟ್ ಮಾಡುತ್ತಿದ್ದರು ಎನ್ನಲಾಗಿದೆ.
ಯೂಟ್ಯೂಬರ್‌ಗಳು ಹುಟ್ಟುಹಬ್ಬದ ಪಾರ್ಟಿಯಿಂದ ಮನೆಗೆ ಹೋಗುತ್ತಿದ್ದಾಗ ಅವರ ಕಾರು ಎದುರಿನಿಂದ ಬರುತ್ತಿದ್ದ ಬೊಲೆರೊಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನರು ಆಂಬ್ಯುಲೆನ್ಸ್‌ನೊಂದಿಗೆ ಸಹಕರಿಸಿ ಯುವಕರನ್ನು ಸಿಎಚ್‌ಸಿ ಗಜರೌಲಾ ಆಸ್ಪತ್ರೆಗೆ ಸಾಗಿಸಿದ್ದಾದರೂ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಮ್ರೋಹಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.