ರಾಂಗ್‌ರೂಟ್‌ನಲ್ಲಿ ಬಂದ ಕಾರ್‌ನಿಂದ ಭೀಕರ ಅಪಘಾತ, ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಕಾರೊಂದು ಬಂದಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಮುಂಬೈನಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಲ್ನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯ ಕಡ್ವಾಂಚಿ ಗ್ರಾಮದ ಬಳಿ ನಿನ್ನೆ ರಾತ್ರಿ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇ ಅಥವಾ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಸ್ವಿಫ್ಟ್ ಡಿಜೈರ್ ವಾಹನವು ಇಂಧನ ತುಂಬಿದ ನಂತರ ರಾಂಗ್ ಸೈಡ್‌ನಿಂದ ಹೆದ್ದಾರಿಗೆ ಪ್ರವೇಶಿಸಿ, ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!