March 22, 2026
Sunday, March 22, 2026
spot_img

ಅಮೆರಿಕದಲ್ಲಿ ಭೀಕರ ಅಪಘಾತ:  ಕೋಲಾರ ಮೂಲದ ಬಾಡಿ ಬಿಲ್ಡರ್ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಮೃತಪಟ್ಟಿದ್ದಾರೆ.

ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ ದೈಹಿಕ ತರಬೇತಿಯನ್ನೂ ಸಹ ಅವರು ನೀಡಿದ್ದರು. ಅವರು ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !