ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಮೇಥಿಯಲ್ಲಿ ಬೆಳಗ್ಗೆ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಉತ್ತರ ಪ್ರದೇಶದ ಸಿವಾನ್ ಎಂಬ ಹಳ್ಳಿಯಿಂದ ದೆಹಲಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು, ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ