ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು , ಲಾರಿ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಆತನ ದೇಹ ಛಿದ್ರ ಛಿದ್ರವಾಗಿದೆ.
ಇನ್ನೊರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ದೇಹ ನುಜ್ಜು ಗುಜ್ಜಾಗಿದೆ. ಓರ್ವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದು ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.