ಬೀದರ್‌ ನಲ್ಲಿ ಭೀಕರ ಅಪಘಾತ: ಚಲಿಸುತ್ತಿದ್ದ ಕಾರು ಪಲ್ಟಿ, ಓರ್ವ ಮೃತ್ಯು, ಮತ್ತೋರ್ವನಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ತಕ್ಷಣ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಪಾರಾಗಿದ್ದಾರೆ.

ಸುನೀಲ್‌ ಬಸವರಾಜ್‌ ನರುಣೆ (28) ಅಪಘಾತದಲ್ಲಿ ಮೃತಪಟ್ಟವರು. ಗಾಯಗೊಂಡಿರುವ ಅಂಕುಶ್‌ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಬಸವಕಲ್ಯಾಣ ತಾಲೂಕಿನ ಬಂಗ್ಲಾದ ಸಸ್ತಾಪುರ ಅತಲಾಪೂರ ಕ್ರಾಸ್ ಬಳಿ ಕಾರು ಅತಿವೇಗದಲ್ಲಿ ಚಲಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಸುನೀಲ್‌ ಬಸವರಾಜ್‌ ನರುಣೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಕುಶ್‌ ಪೂಜಾರಿ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!