ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಮೇಶ್ (55) ಮತ್ತು ಶಿವಲಿಂಗಪ್ಪ (65) ಮೃತರು.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.