ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಮೂರು ವರ್ಷದ ಕಂದಮ್ಮ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಕಂದಮ್ಮ ಪ್ರಾಣಕಳೆದುಕೊಂಡಿದೆ.

ತಂದೆ ಆಂಜಿನೇಯ-ಮಮತಾ ಪುತ್ರ ಮೂರು ವರ್ಷದ ಧನ್ವಿತ್ ಮೃತಪಟ್ಟ ಕಂದಮ್ಮ.  ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಅಪಘಾತ ಸಂಭವಿಸಿದೆ. ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿದ್ದು, ಒಂದು ಕಿ.ಮೀ. ದೂರ ಬೈಕ್‌ನ್ನು ಎಳೆದುಕೊಂಡು ಹೋಗಿದೆ.

ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!