ಹಾವೇರಿಯಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ, 20 ಕುರಿಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಬೊಲೆರೋ ವಾಹನ ಪಲ್ಟಿಯಾಗಿ ನಡೆದ ಅಪಘಾತದಲ್ಲಿ ಮೂವರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ.

ಮೈಲಾರಪ್ಪ ಕೈದಾಳ(40), ಗುಡ್ಡಪ್ಪ ಕೈದಾಳ(42), ಶಿವಕುಮಾರ ಹೊಳೆಯಪ್ಪನವರ(22) ಮೃತಪಟ್ಟವರು ಎಂದು ಹೇಳಲಾಗಿದೆ.

ಬೊಲೆರ ವಾಹನದಲ್ಲಿದ್ದ 20 ಕುರಿಗಳು ಕೂಡ ಸಾವನ್ನಪ್ಪಿವೆ. ಕುರಿಗಳನ್ನು ಖರೀದಿಸಿ ಊರಿಗೆ ತೆರಳುತ್ತಿದ್ದರು. ಬಾಗಲಕೋಟೆಯಿಂದ ರಾಣೆಬೆನ್ನೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!