ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಶಿವಮೊಗ್ಗ ಮೂಲದ 13 ಮಂದಿ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಶಿವಮೊಗ್ಗ ಮೂಲದ 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್​ಎಹಟ್ಟಿ ಗ್ರಾಮದ ನಿವಾಸಿಗಳಾದ ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಮೃತರು.

ಟಿಟಿಯಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!