ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಬಸ್ ಗೆ ಕಾರು ಡಿಕ್ಕಿ, ಮೂವರು ಪ್ರಯಾಣಿಕರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಆದರೆ ಅವರು ಆಂಧ್ರ ಮೂಲದವರು ಎನ್ನಲಾಗಿದೆ.

ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!