ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ರಜೌರಿಯ ಥಾನಮಂಡಿ ಪ್ರದೇಶದಲ್ಲಿ ಸಂಭವಿಸಿದ ಕಾರ್ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಒಬ್ಬರನ್ನು ಮೊಹಮ್ಮದ್ ಯುನಿಸ್ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಿಎಂಸಿಯ ವೈದ್ಯಕೀಯ ಅಧೀಕ್ಷಕ ಡಾ. ಮೊಹಮದ್ ಹುಸೇನ್ ಬಜಾರ್ ಮಾಹಿತಿ ನೀಡಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದಿದ್ದಾರೆ. ಮೃತರ ವಿವರ ಹಾಗೂ ಅಪಘಾತ ಹೇಗಾಯ್ತು ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

https://twitter.com/ANI/status/1676393463821246464?s=20

 

 

 

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!