ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ಅಫಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ ಘಟನೆ ನಡೆದಿದೆ.
ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಕಂಪನಿಯ ಬುಲೆಲೋ ಪಿಕಫ್ ವಾಹನ ಹಾಗೂ ಕಾರಿನ ಮಧ್ಯ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದ್ದು, ಅಫಘಾತದಲ್ಲಿ ಭಾರ್ಗವ್ ಕೃಷ್ಣ (55), ಪತ್ನಿ ಸಂಗೀತಾ (45), ಪುತ್ರ ಉತ್ತಮ್ ರಾಘವನ್ (28) ಹಾಗೂ ಕಾರಿನ ಚಾಲಕ ಸೇರಿದಂತೆ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮೃತಪಟ್ಟಿರುವ ಎಲ್ಲರೂ ಹೈದರಾಬಾದ್ ನಗರದ ನಿವಾಸಿಗಳಾಗಿದ್ದು, ಹೈದರಾಬಾದ್,ನಿಂದ ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಗಾಣಗಾಪುರಿನ ದತ್ತಾತ್ರೇಯ ದೇಗುಲದ ದರ್ಶನ ಮಾಡಲು ತೆರಳುತ್ತಿದ್ದರು. ಅಪಘಾತದಲ್ಲಿ ಮೃತಪಟ್ಟಿರುವ ಮೃತದೇಹಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಶವಾಗಾರಕ್ಕೆ ರವಾನಿಸಲಾಗಿದ್ದು, ಕಮಲಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.