ಕೊಪ್ಪಳದಲ್ಲಿ ಭೀಕರ ಅಪಘಾತ: ಹುಟ್ಟು ಹಬ್ಬ ಆಚರಿಸಿಕೊಂಡು ವಾಪಸ್ಸಾಗುತ್ತಿದ್ದವರು ಸೆರಿದ್ದು ಮಸಣಕ್ಕೆ

ಹೊಸದಿಗಂತ ವರದಿ ಕೊಪ್ಪಳ:
ಹುಟ್ಟುಹಬ್ಬ ಆಚರಣೆ ಮುಗಿಸಿಕೊಂಡು ಮನೆಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಗಿರಿಜಮ್ಮ (45), ಶಾಂತಮ್ಮ (32), ಪಾರ್ವತಮ್ಮ(32), ಕಸ್ತೂರಿ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಕೊಪ್ಪಳದಲ್ಲಿ ಆಯೋಜನೆ ಆಗಿದ್ದ ಕುಟುಂಬದವರ ಜನ್ಮದಿನದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಸ್ಕಾರ್ಪಿಯೋ ವಾಹನದಲ್ಲಿ 9 ಮಂದಿ ಯಲಬುರ್ಗಾ ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಐವರು ಸ್ಥಳದಲ್ಲಿ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಪಲ್ಲವಿ (28), ಪುಟ್ಟರಾಜ (7),ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಗಂಭೀರವಾಗಿ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!