ಹೊಸದಿಗಂತ ವರದಿ ಮೈಸೂರು:
ಸಾರಿಗೆ ಸಂಸ್ಥೆ ಯ ಬಸ್ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಆರ್.ಟಿ.ಓ.ಕಚೇರಿ ಬಳಿ ನಡೆದಿದೆ. ಜೀಪ್ ನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಗೊಂಡವರನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮತ್ತೋರ್ವರು ಸಾವನ್ನಪ್ಪಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬ್ಯಾಟರಿ ಚಾಲಿತ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ.ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ