ACCIDENT | ರಾಜಸ್ಥಾನದಲ್ಲಿ ಭೀಕರ ಅಪಘಾತ, ಕಾರು ಹೊತ್ತಿ ಉರಿದು ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ಸಿಕಾರ್‌ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವದಹನವಾಗಿದ್ದಾರೆ.

ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸುಟ್ಟುಬೂದಿಯಾಗಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್‌ಪಿಜಿ ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್‌ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಸ್ಥಳೀಯರು ಕಾರಿನ ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಒಳಗಿನಿಂದ ಲಾಕ್‌ ಆದ ಕಾರಣ ಕಾರಿನ ಬಾಗಿಲು ತೆಗೆಯಲು ಆಗಿಲ್ಲ. ಕ್ಷಣಮಾತ್ರದಲ್ಲೆ ಮುಗಿಲೆತ್ತರಕ್ಕೆ ಬೆಂಕಿ ಹರಡಿ ಜನರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!