SHOCKING | ರಾಮನಗರದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ರಮಂಗರದ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ನಡೆದಿದೆ.

ಕಾರು ಮಾಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!