ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಲ್ಲಿ ಭೀಕರ ಅಪಘಾತ, ವೇಗವಾಗಿ ಬಂದ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವು.
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಲಕ್ಷಣ್ ವಡ್ಕರ್ (55) ಬೈಲಪ್ಪ ಬಿರಾದಾರ್ (45) ಕಾರು ಚಾಲಕ ರಫೀಕ್ ಮುಲ್ಲಾ (25) ರಾಮಣ್ಣ ನಾಯಕ್ (50) ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು. ಈ ವಿಷಯದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.