ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಇಬ್ಬರು ಮಹಿಳೆಯರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಂಧ್ರ ಪ್ರದೇಶದ ಕುರ್ನೂಲ್‌ನಲ್ಲಿನಿಯಂತ್ರಣ ಕಳೆದುಕೊಂಡು ಬಸ್​ ಪಲ್ಟಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಅಪಘಾತಕ್ಕೆ ಒಳಗಾಗಿದ್ದು, ಹೈದರಾಬಾದ್​ನಿಂದ ಅದೋನಿಗೆ ಬಸ್ ಪ್ರಯಾಣ ಮಾಡುತ್ತಿತ್ತು. ನಿಯಂತ್ರಣ ಕಳೆದುಕೊಂಡ ಬಸ್​ ಕುರ್ನೂಲ್ ಜಿಲ್ಲೆಯ ಕೊಡುಮುರ್ ಎಂಬಲ್ಲಿ ಪಲ್ಟಿಯಾಗಿದೆ.

ಅನಾಹುತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು, ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!