ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ-ಬದೌನ್ ಹೆದ್ದಾರಿಯಲ್ಲಿ ಟೆಂಪೋ ಮತ್ತು ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬದೌನ್ ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಲಭಿಸಿದ ತಕ್ಷಣ ತಂಡವು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಗಾಯಗೊಂಡ ವ್ಯಕ್ತಿ ಉತ್ತರ ಪ್ರದೇಶದ ಬರೇಲಿಯವರು ಎಂದು ಗುರುತಿಸಲಾಗಿದೆ.
ಸರ್ಕಲ್ ಆಫೀಸರ್ ಸಂಜೀವ್ ಕುಮಾರ್ ಮಾತನಾಡಿ, “ಇಂದು ಮುಜಾರಿಯಾ ಪ್ರದೇಶದಲ್ಲಿ ಟೆಂಪೋ ಮತ್ತು ಪಿಕಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ, ಐದು ಜನರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ ಮತ್ತು ಇನ್ನೊಬ್ಬ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.” ಎಂದು ತಿಳಿಸಿದ್ದಾರೆ.