ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿ ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಆಲೂರಿನ ಸಿದ್ದಲಿಂಗಯ್ಯ(39) ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ದೇವಸಮುದ್ರದ ಕೊಟ್ರಯ್ಯ(26) ಮೃತ ರ್ದುದೈವಿಗಳು. ಗಾಯಗೊಂಡ ಮತ್ತೊಬ್ಬ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.