Tuesday, August 16, 2022

Latest Posts

ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಹೊಸದಿಗಂತ ವರದಿ, ಯಾದಗಿರಿ:
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದು ವರ್ಷದ ಹೆಣ್ಣುಮಗು ಸೇರಿ ಆರು ಜನರು ಸಾವನ್ನಪ್ಪಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಡೆದಿದೆ.
ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದ ಭೀಕರತೆಗೆ ಸ್ಥಳದಲ್ಲೇ ಮೂರು ಜನರು ಸಾವನ್ಪಪ್ಪಿದರೆ, ಆಸ್ಪತ್ರೆಯಲ್ಲಿ ಮೂರು ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಹನದಲ್ಲಿದ್ದವರು ತೇಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಘಟನೆ ನಡೆದಿದೆ. 407 ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗುರಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss