ಬಾಗಲಕೋಟೆ ಬಳಿ ಭೀಕರ ಅಪಘಾತ : ನಾಲ್ವರ ದುರ್ಮರಣ

ಹೊಸದಿಗಂತ ವರದಿ ಬಾಗಲಕೋಟೆ:

ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರೋ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂಬ ನಾಲ್ವರು ಮೃತಪಟ್ಟಿದ್ದು, ಮೃತರನ್ನೆಲ್ಲಾ ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ.

ಇವರೆಲ್ಲಾ ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು, ಇನ್ನು ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿದ್ದು, ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರ ತೆಗೆಯಲಾಯಿತು. ಇತ್ತ ಮೃತದೇಹಗಳನ್ನು ಬೀಳಗಿ ತಾಲೂಕಾಸ್ಪತ್ರೆಗೆ ಶವಪರೀಕ್ಷೆಗೆ ಕೊಂಡೊಯ್ಯಲಾಯಿತು. ಸ್ಥಳದಲ್ಲಿ ಮೃತರ ಸಂಭಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!