ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿಯಾಗಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಯರಬಹಳ್ಳಿ ಹತ್ತಿರ ನಡೆದಿದೆ.
ನಾಗರಾಜ್ ಶೆಟ್ಟಿ(55), ವಿಶಾಲಾಕ್ಷಮ್ಮ(75)ಮೃತರು. ನಾಗಾರಾಜ್ ಶೆಟ್ಟಿ ಮಗಳನ್ನು ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ಹೋಗುವಾಗ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಐಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಾಹನ ಡಿಕ್ಕಿ:ಅಪರಿಚಿತ ಸಾವು
ಹಿರಿಯೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಆದಿವಾಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯೊಡೆದ ವೇಗಕ್ಕೆ ಮೃತನ ದೇಹ ಗುರುತು ಸಿಗುತ್ತಿಲ್ಲ. ಇನ್ನು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸುತ್ತಿದ್ದಾರೆ.