ದಿಗಂತ ವರದಿ ಸುಂಟಿಕೊಪ್ಪ:
ಸ್ಕೂಟರ್’ಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವಿಗೀಡಾದ ಘಟನೆ ಪಟ್ಟಣದಲ್ಲಿ ನಡೆದಿದೆ.
ಕೆದಕಲ್ ಸಮೀಪದ ಸವೆಂತ್ ಮೈಲ್ ನಿವಾಸಿ ಇಬ್ರಾಹಿಂ (60) ಎಂಬವರೇ ಸಾವಿಗೀಡಾದವರು.
ಭಾನುವಾರ ಸುಂಟಿಕೊಪ್ಪದಿಂದ ಕುಶಾಲನಗರದತ್ತ ತೆರಳುತ್ತಿದ್ದ ಇಬ್ರಾಹಿಂ ಅವರು ಚಾಲಿಸುತ್ತಿದ್ದ ಸ್ಕೂಟರ್’ಗೆ ಇಲ್ಲಿನ ಅಯ್ಯಪ್ಪ ದೇವಸ್ಥಾನದ ಬಳಿ, ಕೇರಳದ ಕಣ್ಣೂರಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಿಂಬದಿಯಿಂದ ಡಿಕ್ಕಿಯಾಗಿತ್ತು.
ಈ ಸಂದರ್ಭ ರಸ್ತೆಗೆ ಬಿದ್ದಿದ್ದ ಇಬ್ರಾಹಿಂ ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು.
ಕೂಡಲೇ ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ರಾಹಿಂ ಅವರು ತಡರಾತ್ರಿ ಸಾವಿಗೀಡಾಗಿದ್ದಾರೆ. ಸುಂಟಿಕೊಪ್ಪ ಪೋಲಿಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.