ಹೊಸದಿಗಂತ ಮಂಗಳೂರು:
ಉಡುಪಿ ಜಿಲ್ಲೆಯ ಉಡುಪಿ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಮಿನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಟ 17 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರಿಗೆ ಸ್ಥಿತಿ ಗಂಭೀರವಾಗಿದೆ.
ಈ ಘಟನೆ ಇಂದು ಬೆಳಗ್ಗೆ ನಡೆದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಅಪಘಾತಕ್ಕೀಡಾದ ಮಿನಿ ಬಸ್ ತಮಿಳುನಾಡು ಮೂಲದ್ದಾಗಿದ್ದು, ಇದರಲ್ಲಿನ ಪ್ರಯಾಣಿಕರು ಪುಣ್ಯ ಕ್ಷೇತ್ರಗಳ ದರ್ಶನ ನಡೆಸುತ್ತಿದ್ದರು.
ಮಂಗಳೂರಿನಿಂದ ಕೊಲ್ಲೂರು ಕಡೆಗೆ ತೆರಳುತ್ತಿದ್ದ ವೇಳೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಮಿನಿ ಬಸ್ ಜಖಂಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.