ಯಲ್ಲಾಪುರ ಬಳಿ ಭೀಕರ ಅಪಘಾತ: ಇನ್ನೋವಾಗೆ ಡಿಕ್ಕಿಯಾಗಿ ಪಲ್ಟಿಯಾದ ಪ್ರವಾಸಿ ಬಸ್

ಹೊಸದಿಗಂತ ವರದಿ ಯಲ್ಲಾಪುರ:‌ 

ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಬಸ್ ಪಲ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಪ್ರವಾಸಕ್ಕೆಂದು ಯಲ್ಲಾಪುರ ಕಡೆಯಿಂದ ಗೋಕರ್ಣ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮಂಗಳೂರಿನಿಂದ ಮುಂಬೈ ಕಡೆ ಚಲಿಸುತ್ತಿದ್ದ ಇನೋವಾ ಕಾರ್‌ ನಡುವೆ ಅಪಘಾತವಾಗಿದ್ದು, ಅಪಘಾದಿಂದಾಗಿ ಖಾಸಗಿ ಬಸ್ ಹೆದ್ದಾರಿಯ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಾರಾಷ್ಟ್ರದಿಂದ ಪ್ರವಾಸಿಗರು ಖಾಸಗಿ ಬಸ್ ಮೂಲಕ ಗೋಕರ್ಣ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಇನ್ನೋವಾ ಕಾರನಲ್ಲಿದ್ದವರು ಮಂಗಳೂರಿನಿಂದ ಕುಟುಂಬ ಸಮೇತರಾಗಿ ಮುಂಬೈಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇನ್ನೋವಾ ಕಾರನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!