ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್​ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್​ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!