ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹಾರೋಬಂಡೆ ಕ್ರಾಸ್ ಬಳಿ ಘಟನೆ ನಡೆದಿದ್ದು, ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದು, ಅವರ ಮೇಲೆಯೇ ಹರಿದಿದೆ. ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ ಕಲಬುರ್ಗಿಯ ಲಕ್ಷ್ಮಣ ಎನ್ನುವವರದ್ದು ಎನ್ನಲಾಗಿದೆ.
ಯಾವ ವಾಹನದಿಂದ ಅಪಘಾತ ಸಂಭವಿಸಿದೆ, ಚಾಲಕ ಯಾರು ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.