ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ರಿಂಗ್ ರಸ್ತೆಯಲ್ಲಿ ಕಾರು ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ರು ಮೃತಪಟ್ಟಿದ್ದಾರೆ.
ರಿಂಗ್ ರಸ್ತೆಯಲ್ಲಿ ಬೈಕ್ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಕಾರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲಿಯೇ ಬೈಕ್‌ನಲ್ಲಿದ್ದವರು ಮೃತಪಟ್ಟಿದ್ದಾರೆ.
ಪೊಲೀಸರು ತಡವಾಗಿ ಬಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.