ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಗು ಸಹಿತ ನಾಲ್ವರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಬಳಿ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!