ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದಾರುಣ ಸಾವು

ಹೊಸದಿಗಂತ ತುಮಕೂರು:

ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಬೆಳ್ಳಂಬೆಳಗ್ಗೆ ಭೀಕರ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ನಿವಾಸಿಗಳಾದ ಮಹಮದ್ ಆಸೀಫ್ (12 ), ಮಮ್ತಾಜ್ (38 ), ಶಾಖೀರ್ ಹುಸೇನ್ (22 ) ಎಂದು ಗುರುತಿಸಲಾಗಿದೆ.

ಮೃತರು ತುಮಕೂರಿನಿಂದ ತಮ್ಮ ಊರಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ತಾಯಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಮೂವ್ವರು ಒಂದೇ ಬೈಕಿನಲ್ಲಿ ತೆರಳುತ್ತಿರುವಾಗ, ಮುಂಜಾನೆಯಲ್ಲಿ ಮಂಜು ಬೀಳುತ್ತಿದ್ದರಿಂದ ಮುಂದಿನ ಟ್ರಾಕ್ಟರ್ ಕಾಣಿಸದೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್‌ ವೆಂಕಟ್, ಡಿವೈಎಸ್ಪಿ ಚಂದ್ರಶೇಖರ್ ಹಾಗೂ ಗ್ರಾಮಾಂತರ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!