ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ನೋಡಿ ವಾಪಾಸಾಗುವ ವೇಳೆ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದ್ದು, ಮಂಗಳೂರಿನ ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲಿಪ್ ಲೋಬೋ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಿತೀಶ್ ಬಂಡಾರಿ,ಪ್ರೀತಿ ಲೋಬೋ ಹಾಗೂ ಹರೀಶ್ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗದಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.