ಭೀಕರ ಅಪಘಾತ: ಐಷಾರಾಮಿ ಕಾರಿನ ಹೊಡೆತಕ್ಕೆ ಬಲಿಯಾದ ಯುವತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ನೋಯ್ಡಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐಷಾರಾಮಿ ಕಾರೊಂದು ಯುವತಿಯ ದ್ವಿಚಕ್ರ ವಾಹನಕ್ಕೆ ಗುದ್ದಿ, ಕೆಲ ಮೀಟರ್‌ಗಳ ದೂರ ಎಳೆದೊಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ದೀಪಿಕಾ ತ್ರಿಪಾಠಿ (24) ಮೃತಪಟ್ಟ ಯುವತಿ. ನೋಯ್ಡಾದ ಸೆಕ್ಟರ್ 96ನಲ್ಲಿ ಡಿವೈಡರ್ ನಿಂದ ತಮ್ಮ ಕಚೇರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಶರವೇಗದಲ್ಲಿ ಬಂದ ಜಾಗ್ವಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಲದೂರದ ವರೆಗೆ ಎಳೆದೊಯ್ದರಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರಿನ ಚಾಲಕ ಹರಿಯಾಣ ಮೂಲದ ಸ್ಯಾಮ್ಯುಯೆಲ್ ಆಂಡ್ರ‍್ಯೂ ಪೈಸ್ಟರ್ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ದೀಪಿಕಾ ಅವರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!